ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ಶೈಕ್ಷಣಿಕ ಪರಿಕರ ವಿತರಣೆ

ಉಡುಪಿ, ಜೂ.25: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳಿಗ್ಗೆ 9.30ರಿಂದ ಸಂಪನ್ಮೂಲ ವ್ಯಕ್ತಿ ದಾಮೋದರ ಶರ್ಮ ಬಾರ್ಕೂರು ಅವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ₹5 ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿ ಸಹಾಯಧನ ಹಾಗೂ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!