ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ಅಡಿಯಲ್ಲಿ ನೂತನವಾಗಿ ಸ್ಥಾಪನೆಯಾದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕ್ಲಬ್‌ನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಕ್ಲಬ್ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಚುನಾಯಿತ ಗೋವರ್ಧನ್ ಶೆಟ್ಟಿ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲ ವೆಂಕಟೇಶ್ ಹೆಬ್ಬಾರ್ ಶುಭಾಶಯ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂತನ ಕ್ಲಬ್ ಅಧ್ಯಕ್ಷ ಬಾಬು ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಪ್ರಥಮ ಮಹಿಳೆ ಮಮತಾ ಶೆಣೈ, ಸಂಪುಟ ಕಾರ್ಯದರ್ಶಿ ಎಚ್.ಆರ್. ಚಂದ್ರೇಗೌಡ, ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡಿಯಾರ್ ವಿಟ್ಲ, ಗವರ್ನರ್ ಸಂಯೋಜಕಿ ಜ್ಯೋತಿ ಎಸ್. ಶೆಟ್ಟಿ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆರಂಭದಲ್ಲಿ ಎಕ್ಸ್‌ಟೆನ್ಷನ್ ಚೇರ್ಮನ್ ರಾಮಚಂದ್ರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಕಾರ್ಯಕ್ರಮ ನಿರೂಪಣೆ ಹಾಗೂ ವಂದನಾರ್ಪಣೆ ನೆರವೇರಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನೂತನ ಕ್ಲಬ್ ಸ್ಥಾಪನೆಗೆ ಪ್ರಮುಖ ಪಾತ್ರವಹಿಸಿದ ದೇವಿಪ್ರಸಾದ್ ರಾವ್, ರಾಮಚಂದ್ರ ರಾವ್ ಹಾಗೂ ಸುನಿಲ್ ಹೆಗಡೆ ಅವರನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅಭಿನಂದಿಸಿ ಗೌರವಿಸಿದರು.