ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಬಂಟ್ವಾಳದಲ್ಲಿ ಮೆಡಿಕಲ್‌ಗಳ ಪರಿಶೀಲನೆ

ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ವತಿಯಿಂದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಮೆಡಿಕಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಪರಿಶೀಲನೆ ವೇಳೆ ಮೆಡಿಕಲ್‌ಗಳಲ್ಲಿ ಮಾರಾಟವಾಗುವ ಔಷಧಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ವೈದ್ಯರ ಪ್ರಿಸ್ಕ್ರಿಪ್ಷನ್ ಆಧಾರಿತ ಔಷಧಗಳ ವಿತರಣೆ, ನಿಷೇಧಿತ ಹಾಗೂ ದುರುಪಯೋಗಕ್ಕೆ ಒಳಪಡುವ ಔಷಧಿಗಳ ಸಂಗ್ರಹ ಮತ್ತು ಮಾರಾಟದ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾದಕ ವಸ್ತುಗಳ ದುರುಪಯೋಗಕ್ಕೆ ಕಾರಣವಾಗಬಹುದಾದ ಔಷಧಿಗಳನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಮಾರಾಟ ಮಾಡಬಾರದು ಎಂದು ಮೆಡಿಕಲ್ ಮಾಲೀಕರು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಯಿತು. ಅಲ್ಲದೆ, ಸಂಬಂಧಿತ ಕಾನೂನು ಹಾಗೂ ಔಷಧ ಮಾರಾಟಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!