ಉಡುಪಿ ಜಿಲ್ಲೆಯ ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯಂತೆ, ರಿಯಾಜ್ ಅವರು ನದಿಯ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮಾಹಿತಿ ತಿಳಿದು ಕಾಪು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.


