ಉಡುಪಿ: ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಈ ಹಿಂದೆಯೂ ವಿವಿಧ ದೇವಸ್ಥಾನಗಳ ಕಾಣಿಕೆ ಹುಂಡಿಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ತನಿಖೆ ವೇಳೆ ದೈವಸ್ಥಾನಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಅದರ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಆರೋಪಿಯಿಂದ ಇನ್ನಷ್ಟು ಕಳವು ಪ್ರಕರಣಗಳ ಬಗ್ಗೆ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ


