ನವದೆಹಲಿ, ಜೂನ್ 29: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯ ಕೋರಿದರು.


