ಬಂಟ್ವಾಳ: ಬಿ.ಸಿ.ರೋಡ್‌ನ ರಿಕ್ಷಾ ನಿಲ್ದಾಣ ಸಮಸ್ಯೆಗೆ ಸಂಬಂಧಿಸಿದಂತೆ ರಿಕ್ಷಾ ಚಾಲಕರ ನಿಯೋಗವು ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿತು.


ಈ ಸಂದರ್ಭದಲ್ಲಿ ರಿಕ್ಷಾ ಚಾಲಕರು ನಿಲ್ದಾಣದ ಕೊರತೆಯಿಂದ ಎದುರಾಗುತ್ತಿರುವ ತೊಂದರೆಗಳು, ಪ್ರಯಾಣಿಕರಿಗೆ ಆಗುತ್ತಿರುವ ಅಸೌಕರ್ಯ ಹಾಗೂ ತಮ್ಮ ಜೀವನೋಪಾಯದ ಮೇಲಿನ ಪರಿಣಾಮದ ಕುರಿತು ವಿವರಿಸಿದರು.

ಚಾಲಕರ ಮನವಿಯನ್ನು ಆಲಿಸಿದ ರಮಾನಾಥ ರೈ, ಸಮಸ್ಯೆಯ ಗಂಭೀರತೆಯನ್ನು ಮನಗಂಡು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತದೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

