ವಿಟ್ಲ: ಕೇಪು ಪಡಿಬಾಗಿಲು ಸಮೀಪ ವಿದ್ಯುತ್ ಕಂಬದ ಮೇಲೆ ಮರವೊಂದು ಬಿದ್ದಿದ್ದು, ಇದೇ ವೇಳೆ ಡಾಮರು ರಸ್ತೆಯಲ್ಲಿ ಸಾಗುತ್ತಿದ್ದ ಸ್ವಿಫ್ಟ್ ಕಾರಿಗೆ ಮರ, ಕಂಬ ಬಡಿದಿದ್ದು, ಕಾರಿನೊಳಗಿದ್ದ ದಂಪತಿಗಳು ಅದೃಷ್ಟವಶಾತ್ ಅಪಾಯವಿಲ್ಲದೇ ಪಾರಾಗಿದ್ದಾರೆ.
ಸೋಮವಾರ ಬೆಳಿಗ್ಗೆ ದುರ್ಘಟನೆ ನಡೆದಿದ್ದು, ಕಾರು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿತ್ತು . ಸ್ವಿಫ್ಟ್ ಕಾರಿನ ಮೇಲೆ ಬಿದ್ದಿವೆ. ಬಿದ್ದು ರಭಸಕ್ಕೆ ಕಾರು ಜಖಂಗೊಂಡಿದೆ.
ಘಟನೆಯ ಪರಿಣಾಮ ಕೆಲಕಾಲ ಹೆದ್ದಾರಿ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬಳಿಕ ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ಸಂಚಾರವನ್ನು ಪುನಃ ಆರಂಭಿಸಲಾಯಿತು.



