ಭಕ್ತರ ನಡೆ ಸಾಗುವಳಿಯ ಕಡೆ: ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಭತ್ತದ ನಾಟಿ

ಬಂಟ್ವಾಳ, ಜು. 1: ಸಜೀಪ ಮೂಡ ಗ್ರಾಮದ ಅನ್ನಪಾಡಿಯ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪರ್ವದ ಅಂಗವಾಗಿ ಭಕ್ತರಿಗೆ ತೆನೆ ವಿತರಿಸುವ ಉದ್ದೇಶದಿಂದ ದೇವಾಲಯದ ಗದ್ದೆಯಲ್ಲಿ ಭತ್ತದ ಕೃಷಿಗೆ ಚಾಲನೆ ನೀಡಲಾಯಿತು. ಇದರ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ನೇಜಿ (ಭತ್ತ) ನಾಟಿ ಕಾರ್ಯಕ್ರಮದಲ್ಲಿ ಭಕ್ತರು ಉತ್ಸಾಹದಿಂದ ಪಾಲ್ಗೊಂಡು ಸೇವೆ ಸಲ್ಲಿಸಿದರು.

ಕೆಸಜೀಪ ಮಾಗಣೆತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಮಹಿಳಾ ಸಮಿತಿ ಅಧ್ಯಕ್ಷೆ ವಿಜಯ, ಪ್ರಶಾಂತ್ ಪೂಜಾರಿ, ಲಿಂಗಪ್ಪ ದೋಟ, ಸುರೇಶ್ ಬಂಗೇರ, ಶಂಕರ ಕುಲಾಲ್, ಸಂತೋಷ್ ಬೊಳ್ಳಾಯಿ ಹಾಗೂ ದೇವಸ್ಥಾನದ ಪ್ರಬಂಧಕ ಪ್ರಶಾಂತ್ ಕುಮಾರ್ ಸೇರಿದಂತೆ ಅನೇಕ ಭಕ್ತರು ಸಾಮೂಹಿಕ ಭತ್ತದ ನಾಟಿಯಲ್ಲಿ ಭಾಗವಹಿಸಿದರು.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಭಕ್ತರಿಗೆ ತೆನೆ ವಿತರಿಸುವ ಸಂಪ್ರದಾಯವನ್ನು ಮುಂದುವರಿಸುವ ಉದ್ದೇಶದಿಂದ ಪ್ರತಿವರ್ಷ ದೇವಾಲಯದ ಗದ್ದೆಯಲ್ಲಿ ಭತ್ತದ ಕೃಷಿ ನಡೆಸಲಾಗುತ್ತಿದೆ. ಈ ಸೇವಾ ಕಾರ್ಯದಲ್ಲಿ ಭಕ್ತರ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!