27 ವರ್ಷದ ಲಾರಿ ಚಾಲಕ ಮೃತ್ಯು; ಪೊಲೀಸರು ಸ್ಥಳ ಪರಿಶೀಲನೆ, ತನಿಖೆ ಆರಂಭ
ಬೆಳ್ತಂಗಡಿ, ಜು. 2: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪದ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಅವರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದರು.

ಘಟನೆ ಕುರಿತು ಮೃತನ ತಂದೆ ಶರೀಫ್ ಅವರು ಇದು ಕೊಲೆ ಆಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಕೂಲಂಕುಷ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.


