ವಿಟ್ಲ: ಸರಣಿ ಬ್ಯಾಟರಿ ಕಳ್ಳತನ ಪ್ರಕರಣ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ

ವಿಟ್ಲ: ರಸ್ತೆ ಬದಿ‌ ರಾತ್ರಿ‌ ವೇಳೆ ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳ್ಳತನ‌ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸರು ಅವರ ಬಳಿ‌ ಇದ್ದ ೧೦ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50 ವ.) ಹಾಗೂ ಕಾಸರಗೋಡು ಜಿಲ್ಲೆಯ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33 ವ.) ಬಂಧಿತ ಆರೋಪಿಗಳು.‌

ಬಂಧಿತರ ಮೇಲೆ ವಿಟ್ಲ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರ: 38/2025, 39/2026, 41/2026, 123/2026 ಹಾಗೂ 126/2026 ರಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದೆ. ಕಾಸರಗೋಡಿನಿಂದ ವಾಹನಗಳಲ್ಲಿ ಬರುತ್ತಿದ್ದ ತಂಡ ವಾಹನಗಳ ಬ್ಯಾಟರಿ ಕಳವು ಮಾಡಿ‌ ಆ ಬಳಿಕ ಪರಾರಿಯಾಗುತ್ತಿತ್ತು. ಪ್ರಕರಣದ ಗಂಭೀರವಾಗಿ ತೆಗೆದುಕೊಂಡು ಕೃತ್ಯ ಎಸಗಿದವರ ಬೆನ್ನು‌ ಹತ್ತಿದ ಪೊಲೀಸರು ಆರೋಪಿಗಳನ್ನು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಿದ 10 ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

SHARE
Loading spinner

Leave a Reply

Your email address will not be published. Required fields are marked *

error: Content is protected !!