ವಿಟ್ಲ, ಜು. 10: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಿಕ್ಷಕಿ ಶ್ವೇತಾ ರವಿಕುಮಾರ್, ಕಾರ್ಯದರ್ಶಿಯಾಗಿ ಉದ್ಯಮಿ ದಿನಕರ ಆಳ್ವ, ಹಾಗೂ ಕೋಶಾಧಿಕಾರಿಯಾಗಿ ಭಾರತ್ ಪೆಟ್ರೋಲ್ ಬಂಕ್‌ನ ಮಾಲಕರಾದ ಕೃಷ್ಣ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 12ರಂದು (ಭಾನುವಾರ) ಸಂಜೆ 7 ಗಂಟೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಲಿದೆ.

ಜಿಲ್ಲೆಯ ಜಿಇಟಿ ಕೋ-ಆರ್ಡಿನೇಟರ್ ಜಗದೀಶ್ ಎಡಪಡಿತಾಯ ಹಾಗೂ ಚಿತ್ರಾ ಎಡಪಡಿತಾಯ ಅವರು ಪದಗ್ರಹಣ ಅಧಿಕಾರಿಗಳಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಗೌರವ ಅತಿಥಿಯಾಗಿ ನಿಕಟಪೂರ್ವ ಹೆಚ್ಚುವರಿ ಸಂಪುಟ ಕಾರ್ಯದರ್ಶಿ ಚಂದ್ರಹಾಸ್ ರೈ ಭಾಗವಹಿಸಿ ಚಾರ್ಟರ್ ನೈಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಲಯನ್ಸ್ ಸದಸ್ಯರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕ್ಲಬ್ ಪ್ರಕಟಣೆಯಲ್ಲಿ ಕೋರಲಾಗಿದೆ.

