ಗದಗ: ಗದಗ ಜಿಲ್ಲೆಯ ದಲಿತ ಸಾಹಿತ್ಯ ಅಕಾಡೆಮಿ (ದೆಹಲಿ) ಜಿಲ್ಲಾ ಅಧ್ಯಕ್ಷರು, ಪ್ರೌಢಶಾಲೆಯ ಆದರ್ಶ ಶಿಕ್ಷಕರು ಹಾಗೂ ಸಮಾಜಸೇವಕರಾದ ಡಾ. ಶಾಂತಕುಮಾರ ಬಿ. ಭಜಂತ್ರಿ ಅವರಿಗೆ ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026”ಗೆ ಆಯ್ಕೆ ಮಾಡಲಾಗಿದೆ.
ಕಾಸರಗೋಡಿನ ಕನ್ನಡ ಭವನದಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಜುಲೈ 26ರಂದು ನಡೆಯಲಿರುವ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ” ಹಾಗೂ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ ವೇದಿಕೆಯಲ್ಲಿ ಪ್ರದಾನ ಮಾಡಲಾಗುತ್ತದೆ.

ಈ ಕುರಿತು ಪ್ರಕಟಣೆ ನೀಡಿರುವ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್, ಡಾ. ಶಾಂತಕುಮಾರ ಬಿ. ಭಜಂತ್ರಿ ಅವರ ಸಮಾಜಮುಖಿ ಸೇವೆ, ಶಿಕ್ಷಣ ಕ್ಷೇತ್ರದ ಕೊಡುಗೆ ಮತ್ತು ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


