ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಆಶೀರ್ವಾದ ಪಡೆದರು.

ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸುಭಿಕ್ಷತೆ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. Z-ಪ್ಲಸ್ ಭದ್ರತೆಯ ನಡುವೆ ಅವರು ದೇವಸ್ಥಾನಕ್ಕೆ ಆಗಮಿಸಿದ್ದರಿಂದ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮುಖ್ಯಮಂತ್ರಿಯಾದ ಬಳಿಕ ಸತೀಶನ್ ಅವರ ಇದು ಕೊಲ್ಲೂರು ಕ್ಷೇತ್ರಕ್ಕೆ ಮೊದಲ ಭೇಟಿ ಆಗಿದ್ದು, ಅವರು ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿದ್ದಾರೆ. ಪೂಜೆ ಬಳಿಕ ಅವರು ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!