ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಮೃತಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಎಂದು ಗುರುತಿಸಲಾಗಿದೆ.

ಹೊಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!