ವಿಟ್ಲ: ಪಿಎಂಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಆಯ್ಕೆ ಸಭೆಯು ಜುಲೈ 14ರಂದು ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಪ್ರವೀಣ್ ಎಂ. ಹಾಗೂ ಸದಸ್ಯರಾಗಿ ಅನಿತಾ, ವಿಶಾಲಕ್ಷಿ, ಅನುಶ್ರೀ, ದಾಕ್ಷಾಯಿಣಿ, ವಿಜಯ, ಅಬ್ದುಲ್ ರಹಿಮಾನ್, ವೆಂಕಟರಮಣ ಹಾಗೂ ರಾಜಶೇಖರ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಯ್ಕೆ ಸಭೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮನಾಥ್ ವಿಟ್ಲ ಹಾಗೂ ಸ್ಥಳೀಯ ಕೌನ್ಸಿಲರ್ ರವಿಪ್ರಕಾಶ್ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಅಭಿವೃದ್ಧಿಗೆ ಎಸ್ಡಿಎಂಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.


