ಬೆಂಗಳೂರು: ರಾಜ್ಯ ಸರ್ಕಾರ ಜೂನ್ 26, 2026ರಂದು ಹೊರಡಿಸಿರುವ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರವಿಕುಮಾರ್ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

‘ಶಾಶ್ವತ ನಿವಾಸಿ’ ಎಂಬ ಹೊಸ ವರ್ಗವನ್ನು ಸೃಷ್ಟಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಪೌರತ್ವ ಹಾಗೂ ವಲಸೆ ಸಂಬಂಧಿತ ವಿಷಯಗಳು ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸೇರಿರುವುದರಿಂದ ಈ ಅಧಿಸೂಚನೆ ಸಂವಿಧಾನಬಾಹಿರವಾಗಿದೆ ಎಂದು ಬಿಜೆಪಿ ಆಕ್ಷೇಪಿಸಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಪ್ರಮಾಣಪತ್ರ ಜಾರಿಗೊಳಿಸಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ಅಕ್ರಮ ವಲಸಿಗರು ನಕಲಿ ದಾಖಲೆಗಳ ಮೂಲಕ ಸರ್ಕಾರಿ ಸೌಲಭ್ಯಗಳು ಹಾಗೂ ಮತದಾನದ ಹಕ್ಕು ಪಡೆಯುವ ಅಪಾಯವಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.ಕಂದಾಯ ಅಧಿಕಾರಿಗಳ ಮೂಲಕ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆಯಿಂದ ಭ್ರಷ್ಟಾಚಾರ ಹಾಗೂ ನಕಲಿ ದಾಖಲೆಗಳ ಸೃಷ್ಟಿಗೆ ಅವಕಾಶ ಕಲ್ಪಿಸಬಹುದು


