ಜಾತಿ ಸಮೀಕ್ಷೆ ವರದಿ ಬಹಿರಂಗಪಡಿಸಿ: ಕೇಶವ ಪ್ರಸಾದ್ ಆಗ್ರಹ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ಧಪಡಿಸಲಾದ ‘ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿಯನ್ನು ಬಹಿರಂಗಪಡಿಸಬೇಕು ಹಾಗೂ ಮುಂದಿನ ಅಧಿವೇಶನದಲ್ಲಿ ಇದರ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆಗ್ರಹಿಸಿದ್ದಾರೆ.

ಗುರುವಾರ ನಗರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕೊನೆಯ ದಿನಗಳಲ್ಲಿ ವರದಿ ಸರಕಾರದ ಕೈಸೇರಿದೆ. ಪ್ರಸ್ತುತ ಸಿಎಂ ಬದಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವರದಿಯನ್ನು ಕ್ಯಾಬಿನೆಟ್ ಮುಂದೆ ತರುತ್ತಾರಾ ಅಥವಾ ಕಸದ ಬುಟ್ಟಿಗೆ ಎಸೆಯುತ್ತಾರಾ ಎಂದು ಕಾಂಗ್ರೆಸ್ ಉತ್ತರ ಕೊಡಬೇಕು. ಕಾಂಗ್ರೆಸ್ ಗೆ ಹಿಂದುಳಿದ ಸಮಾಜದ ಏಳಿಗೆ ಬಗ್ಗೆ ಎಳ್ಳಷ್ಟೂ ಆಸಕ್ತಿ ಇಲ್ಲ ಎನ್ನುವುದು ಈಗಾಗಲೇ ಹಲವು ಆಯೋಗಗಳ ವರದಿಯ ಬಗ್ಗೆ ಕಾಂಗ್ರೆಸ್ ಸರಕಾರ ತೆಗೆದುಕೊಂಡಿದ್ದ ನಿಲುಗಳನ್ನು ನೋಡಿದಾಗ ತಿಳಿಯುತ್ತದೆ ಎಂದರು.
ವರದಿಯನ್ನು ವಿಧಾನ ಮಂಡಲದಲ್ಲಿ ಚರ್ಚೆಗೆ ತರುವಂಯತೆ ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಾಲಗಿದೆ. ಆ.8ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದೆ ಎನ್ನುವ ಕಾರಣವನ್ನು ಸರಕಾರ ನೀಡಿದೆ. ನ್ಯಾಯಾಲಯದಲ್ಲಿ ಸರಕಾರ ಸೂಕ್ತ ವಾದ ಮಂಡಿಸಬೇಕು ಎಂದು ಅವರು ಆಗ್ರಹಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!