ಬೆಳಗಾವಿ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ರೀ ಸೋಮಶೇಖರ ಅವರು ಜುಲೈ 20ರಂದು (ಸೋಮವಾರ) ಬೆಳಗಾವಿಗೆ ಆಗಮಿಸಲಿದ್ದು, ಕನ್ನಡ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಲಿದ್ದಾರೆ.

ನಗರದ ರಾಮದೇವ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಗಡಿ ಭಾಗದ ಅಭಿವೃದ್ಧಿ, ಕನ್ನಡದ ಹಿತಾಸಕ್ತಿ ಸೇರಿದಂತೆ ವಿವಿಧ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಸಭೆಗೆ ಆಗಮಿಸುವ ಗಣ್ಯರಿಗೆ ಬೆಳಗಿನ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಮಹತ್ವದ ಸಮಾಲೋಚನಾ ಸಭೆಯಲ್ಲಿ ಕನ್ನಡ ಸಂಘಟನೆಗಳ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಪ್ಪದೆ ಭಾಗವಹಿಸುವಂತೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮನವಿ ಮಾಡಿದ್ದಾರೆ.

