ಬುಧವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಅಂತಿಮ ಹಂತದಲ್ಲಿ ಕಾಂಗ್ರೆಸ್ ಚರ್ಚೆ

ಬೆಂಗಳೂರು, ಜು. 20: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಮರಳಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ವೇಗ ಸಿಕ್ಕಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಬುಧವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸದ್ಯ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇದ್ದು, ಎಲ್ಲ ಹುದ್ದೆಗಳನ್ನು ಒಂದೇ ಹಂತದಲ್ಲಿ ಭರ್ತಿ ಮಾಡಬೇಕೇ ಅಥವಾ ಕೆಲವು ಸ್ಥಾನಗಳನ್ನು ಖಾಲಿ ಉಳಿಸಬೇಕೇ ಎಂಬ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ಪಟ್ಟಿಗೆ ಒಪ್ಪಿಗೆ ನೀಡಲಿದ್ದಾರೆ ಎನ್ನಲಾಗಿದೆ. ಮಂಗಳವಾರ ಸಂಜೆ ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸುವ ಸಾಧ್ಯತೆ ಇದೆ.

ಇದೇ ವೇಳೆ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸಭಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಯೂ ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!