ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.)ಯ ಸಂಸ್ಥಾಪಕರಲ್ಲಿ ಪ್ರಮುಖರೂ, ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಹಾಗೂ ಹಿರಿಯ ಹೋರಾಟಗಾರರಾದ ಎಂ. ದೇವದಾಸ್ ಅವರ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅವರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಎಂ. ದೇವದಾಸ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಬಲಿಷ್ಠ ಜನಾಂದೋಲನವಾಗಿ ರೂಪಿಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದರು. ಅಲ್ಲದೆ ಬಜ್ಪೆ ನಾಗರಿಕ ಹಿತ ರಕ್ಷಣಾ ವೇದಿಕೆಯಲ್ಲಿಯೂ ಜೊತೆಯಾಗಿ ನಮ್ಮೊಂದಿಗಿನ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತಿದ್ದರು
ಅವರ ಅಗಲಿಕೆ ದಲಿತ ಚಳವಳಿಗೆ, ಸಾಮಾಜಿಕ ನ್ಯಾಯದ ಹೋರಾಟಕ್ಕೆ ಹಾಗೂ ರಾಜ್ಯದ ಪ್ರಗತಿಪರ ಶಕ್ತಿಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಹೋರಾಟದ ಆದರ್ಶಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶಿಯಾಗಲಿವೆ.

ದೇವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಮತ್ತು ಸಹೋದ್ಯೋಗಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅಥಾವುಲ್ಲಾ ಜೋಕಟ್ಟೆ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

