ಕಾಸರಗೋಡು ಬದಿಯಡ್ಕ ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂಗೆ ಆಹ್ವಾನ

ಕಾಸರಗೋಡು: ಕಾಸರಗೋಡು ಬದಿಯಡ್ಕದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ರೂ. 200 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟನೆಗೆ ಆಗಮಿಸುವಂತೆ ಕೇರಳ ಸಿಎಂ ವಿ.ಡಿ. ಸತೀಶನ್ ಅವರಿಗೆ ಆಹ್ವಾನ ನೀಡಲಾಗಿದೆ.

ಜುಲೈ 22ರಂದು ಅವರನ್ನು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳ ಬಗ್ಗೆಯೂ ಮನವಿ ಸಲ್ಲಿಸಲಾಯಿತು.
​ಮಲೆಯಾಳಿ ಭಾಷಾ ಬಿಲ್‌ನಿಂದ ಕಾಸರಗೋಡು ಹೊರತುಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ, ಅಲ್ಪಸಂಖ್ಯಾತರಿಗೆ ಮೀಸಲಾತಿ, ರೇಷನ್ ಕಾರ್ಡ್‌ನಲ್ಲಿ ಕನ್ನಡ ಹಾಗೂ ಕನ್ನಡ ಶಿಕ್ಷಕರ ನೇಮಕಕ್ಕೆ ಮನವಿ ಮಾಡಲಾಗಿದೆ.

ಇದಕ್ಕೆ ಸ್ಪಂದಿಸಿದ ಸಿಎಂ, ಕರ್ನಾಟಕ ಸಿಎಂ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕ ಎ.ಕೆ.ಎಂ. ಅಶ್ರಫ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!