ಲಯನ್ಸ್ ಕ್ಲಬ್ ಬಂಟ್ವಾಳದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ, ಜುಲೈ 25: ಲಯನ್ಸ್ ಕ್ಲಬ್ ಬಂಟ್ವಾಳದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 25, 2026ರಂದು ಬಂಟ್ವಾಳದ ಇಂದಿರಾ ವಸಂತ ಬಾಳಿಗ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಲಯನ್ ಗೋವರ್ಧನ್ ಶೆಟ್ಟಿ ಅವರು ಪದಗ್ರಹಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ PMCC ಲಯನ್ ವಸಂತ ಶೆಟ್ಟಿ, IPDG ಲಯನ್ ಕುಡ್ಪಿ ಅರವಿಂದ್ ಶೆಣೈ, PDG ಲಯನ್ ಆಲ್ವಿನ್ ಪಟ್ರಾವ್, DCS ಲಯನ್ ಪ್ರಶಾಂತ್ ಶೆಟ್ಟಿ, ಪ್ರಾಂತ್ಯ ಅಧ್ಯಕ್ಷ ಲಯನ್ ಶ್ರೀನಿವಾಸ್ ಪೂಜಾರಿ, ವಲಯ ಅಧ್ಯಕ್ಷ ಲಯನ್ ಉಮೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಲಯನ್ ರೋಹಿತಾಶ್ವ, ಲಯನ್ ದಿವ್ಯಾ ಶೆಟ್ಟಿ, ಲಯನ್ ರಾಮಕೃಷ್ಣ ರಾವ್, ಲಿಯೋ ಕ್ಲಬ್ ಅಧ್ಯಕ್ಷೆ ಶಿಯಾಂಕಾ, ಲಿಯೋ ಕಾರ್ಯದರ್ಶಿ ಸ್ಪಟಿಕ, ಲಿಯೋ ಖಜಾಂಚಿ ಧ್ರುವಿ, ಜಿಲ್ಲಾ ಸಚಿವ ಸಂಪುಟದ ಸದಸ್ಯರು ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯರು ಉಪಸ್ಥಿತರಿದ್ದರು.

ನೂತನ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದ ಲಯನ್ ಚಿತ್ರಾ ಯಡಪಡಿತ್ತಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಲಯನ್ ಜಯಂತಿ ಪ್ರಭು ಅವರು ವಂದನಾರ್ಪಣೆ ಸಲ್ಲಿಸಿದರು. ಖಜಾಂಚಿ ಲಯನ್ ಸುಮಾ ಸುನಿಲ್ ಅವರು ಉಪಸ್ಥಿತರಿದ್ದರು.

ಪದಗ್ರಹಣ ಸಮಾರಂಭದ ಅಂಗವಾಗಿ ಕ್ಲಬ್ ವತಿಯಿಂದ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಮೇಧಾವಿ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವು ಆತ್ಮೀಯ ಸ್ನೇಹಮಿಲನದೊಂದಿಗೆ ಯಶಸ್ವಿಯಾಗಿ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!