ಸಂಪುಟ ವಿಸ್ತರಣೆಗೆ ಕ್ಷಣಗಣನೆ: ರಾಹುಲ್-ಖರ್ಗೆ ಸಭೆಯ ಬಳಿಕ ಹೊಸ ಸಚಿವರ ಪಟ್ಟಿ ಅಂತಿಮ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿದ್ದು, ಹೊಸ ಸಚಿವರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆ ಪಡೆಯಲು ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗುರುವಾರ ಸಂಜೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸಚಿವರ ಪಟ್ಟಿಯ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಹಲವು ನಾಯಕರ ಹೆಸರುಗಳು ಚರ್ಚೆಯಲ್ಲಿದ್ದು, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಆಕಾಂಕ್ಷಿಗಳ ಭವಿಷ್ಯ ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ.

2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದ್ದು, ಸಭಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸಭಾಪತಿ ಹುದ್ದೆಗಳ ಹೆಸರನ್ನೂ ಇದೇ ವೇಳೆ ಅಂತಿಮಗೊಳಿಸುವ ಸಾಧ್ಯತೆ ಇದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!