ಮಂಗಳೂರು, ಆ. 1: ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳ್ತಂಗಡಿ ತಾಲ್ಲೂಕಿನ ನದಿ ತೀರದ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಹಲವು ರಸ್ತೆಗಳು ಹಾಗೂ ಕೃಷಿ ಗದ್ದೆಗಳು ನೀರಿನಿಂದ ಆವೃತವಾಗಿದ್ದು, ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ.

ನೀರು ನಿಂತ ಪರಿಣಾಮ ಕಾರು ಹಾಗೂ ಬೈಕ್ಗಳು ಸ್ಟಾರ್ಟ್ ಆಗದೆ, ವಾಹನಗಳನ್ನು ತಳ್ಳಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಸ್ಥಳೀಯ ಆಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ನದಿ ತೀರದ ನಿವಾಸಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.




