ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ.

ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ (9480805362) ಯನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.



