ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು .ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 9ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜೆಕೆ ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಲಿರುವರು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ , ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘದ ಸಂಘಟನೆಯ ಒಕ್ಕೂಟ ಅಧ್ಯಕ್ಷರಾದ ಎಂ .ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಕಾರ್ಯಕ್ರಮ ಸಂಯೋಜಕರಾದ ಎಸ್ ಆರ್ ವಿಜಯ ಸಮರ್ಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ .ಮಾಲತಿ ಶೆಟ್ಟಿ ಮಾಣೂರವರು ಕಳೆದ 22 ವರ್ಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದು ಕಳೆದ 13 ವರುಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಪತ್ರಿಕೆಯ ವತಿಯಿಂದ ಹಿರಿಯ ಕಿರಿಯ ಬರಹಗಾರರ 49 ಕೃತಿಗಳು ಸರಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಂಡಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಮೂಡುವ ಸಲುವಾಗಿ ಈಗಾಗಲೇ 119 ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಯಶಸ್ವಿಯಾಗಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿ ದಾಖಲೆ ನಿರ್ಮಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!