ಗದಗದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕಿಯ ತಲೆಗೆ ಗಂಭೀರ ಗಾಯ

ಗದಗ:ಬೀದಿ ನಾಯಿಗಳು ದಾಳಿ‌ಮಾಡಿದ ಪರಿಣಾಮ ಮಗುವಿನ ತಲೆಗೆ ಗಂಭೀರ ಗಾಯವಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಡಣದ ವಾರ್ಡ ನಂ. 5ರ ಮಕಾನ ಓಣಿಯಲ್ಲಿ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ಮಾಡಿವೆ.

ಚಿಪ್ಸ್ ತರಲು ಅಂಗಡಿಗೆ ತೆರಳುತ್ತಿದ್ದ ಬಾಲಕಿ ರಾಹಾ ಗಾಡಿವಾಲೆಯ ಮೇಲೆ ಬೀದಿ ನಾಯಿಗಳು ಏಕಾ ಏಕಿ ಕಚ್ಚಿವೆ.
ಇದರಿಂದ ಮಗುವಿನ ತಲೆಗೆ ಗಂಭೀರ ಗಾಯಗಳಾಗಿವೆ.

ತಕ್ಷಣ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದಾರೆ.ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳ ಹಿಂದೆ ಇದೇ ರೀತಿ ಮಗುವೊಂದರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದಾಳಿ ನಡೆದಿದೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಿತಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು
ಪುರಸಭೆಗೆ ಅನೇಕ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಪಾದಿಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!