ಉಡುಪಿ: ವಿಶ್ವ ಹಿಂದೂ ಪರಿಷತ್ (ವಿಹಿಂಪ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಉಡುಪಿ ಜಿಲ್ಲಾ ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.


