ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

ಮಿಜಾರ್: ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಮಿಜಾರ್ ಬಳಿ ನಡೆದಿದೆ.

ಬೆಳಗ್ಗೆ ಸುಮಾರು 6:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ಆಳ್ವಾಸ್ ಕಾಲೇಜಿನ ವಾಚ್‌ಮ್ಯಾನ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಅವರಿಗೆ ಸುಟ್ಟ ಗಾಯಗಳಾಗಿವೆ.

ಸ್ಫೋಟದ ಪರಿಣಾಮ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಪತ್ನಿ ಹಾಗೂ ಮಗನಿಗೂ ಗಾಯಗಳಾಗಿವೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!