ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಬಂಧನ

ಉಡುಪಿ,: ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದ ಹಣದ ವರ್ಗಾವಣೆಗೆ ನೆರವು ನೀಡಿದ ಆರೋಪದಡಿ ಕಾಪು ತಾಲೂಕಿನ ತೆಂಕ ಗ್ರಾಮದ ಚಿರಾಗ್ ಪೂಜಾರಿ (26) ಹಾಗೂ ಎರ್ಮಾಳ್ ತೆಂಕ ನಿವಾಸಿ ಮೊಹಮ್ಮದ್ ಇರ್ಷಾದ್ (43) ಅವರನ್ನು ಬಂಧಿಸಲಾಗಿದೆ.

ಆಗಸ್ಟ್ 7ರಂದು ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದ ಪೊಲೀಸರು, ತನಿಖೆ ಮುಂದುವರಿಸಿದ ವೇಳೆ ಹಣದ ವರ್ಗಾವಣೆಯಲ್ಲಿ ನೆರವು ನೀಡಿದ ಆರೋಪದ ಮೇಲೆ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!