ಗ್ರಾಮೀಣ ಜನರ ಸಬಲೀಕರಣವೇ ವಿಕಸಿತ ಭಾರತದ ನಿಜವಾದ ಅಡಿಪಾಯಕಾಯ್ಕಿಣಿ ಪಂಚಾಯತ್‌ನಲ್ಲಿ ಯಶಸ್ವಿಯಾಗಿ ನಡೆದ VB–G RAM–G ಮಾಹಿತಿ ಕಾರ್ಯಾಗಾರ

ಭಟ್ಕಳ: ಪ್ರತಿಯೊಂದು ಗ್ರಾಮದಲ್ಲಿ ಉದ್ಯೋಗ, ಪ್ರತಿಯೊಂದು ಕುಟುಂಬದಲ್ಲಿ ಆದಾಯ ಭದ್ರತೆ, ಪ್ರತಿಯೊಂದು ಹೊಲಕ್ಕೆ ನೀರು, ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಗೌರವ—ಇವುಗಳ ಸಮನ್ವಯವೇ ನಿಜವಾದ ಅಭಿವೃದ್ಧಿ. ಈ ಆಶಯವನ್ನು ಸಾಕಾರಗೊಳಿಸುವಲ್ಲಿ VB–G RAM–G ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾಯ್ಕಿಣಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಭಟ್ಕಳ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಹೇಳಿದರು.


ಅವರು ಬುಧವಾರ ಕಾಯ್ಕಿಣಿ ಪಂಚಾಯತ್ ಸಭಾಭವನದಲ್ಲಿ ನಡೆದ VB–G RAM–G ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಭಿವೃದ್ಧಿ ಅಧಿಕಾರಿ ನಾಗರಾಜ ಮಾತನಾಡಿ, VB–G RAM–G ಯೋಜನೆಯ ಮಹತ್ವ ಉದ್ಯೋಗವನ್ನು ಗ್ರಾಮೀಣ ಅಭಿವೃದ್ಧಿಯೊಂದಿಗೆ ಜೋಡಿಸುವ ಪ್ರಯತ್ನದಲ್ಲಿದೆ. ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸಲು ಜನಸಮುದಾಯ ಕೈಜೋಡಿಸುವ ಅಗತ್ಯವಿದೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ಮಾತನಾಡಿ, “VB–G RAM–G ಕೇವಲ ಕೆಲಸ ನೀಡುವ ಯೋಜನೆಯಾಗಿ ಉಳಿಯದೆ, ಕೆಲಸದ ಮೂಲಕ ಗ್ರಾಮ ನಿರ್ಮಾಣ ಮಾಡುವ ಯೋಜನೆಯಾಗಬೇಕು. ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಸಾಧಿಸಲು ಸಾಮಾಜಿಕ ಪರಿಶೋಧನೆ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಈರಪ್ಪ ಬೇವಿನಗಿಡ ಸ್ವಾಗತಿಸಿದರು. ವಿಷ್ಣು ನಾಯ್ಕ ವಂದಿಸಿದರು. ಪಂಚಾಯತ್ ಸಿಬ್ಬಂದಿಗಳಾದ ನಾಗವೇಣಿ ನಾಯ್ಕ, ಶ್ರೀನಿವಾಸ ನಾಯ್ಕ, ಈಶ್ವರ ನಾಯ್ಕ, ಕೇಶವ ನಾಯ್ಕ ಹಾಗೂ ಸುಮ ನಾಯ್ಕ ಸಹಕರಿಸಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಯಮುನಾ ನಾಯ್ಕ ಹಾಗೂ ಶಿಲ್ಪಾ ನಾಯ್ಕ ಉಪಸ್ಥಿತರಿದ್ದರು.ಯಶಸ್ವಿಯಾಗಿ ನಡೆದ ಕಾರ್ಯಾಗಾರದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!