ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ

ವೇಣೂರು: 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ 457 ಮತ್ತು 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶರೀಪ್ (46) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಸಂಖ್ಯೆ 535/2016ರಂತೆ ನ್ಯಾಯಾಲಯದ ವಾರಂಟ್ ಜಾರಿಯಾಗಿತ್ತು.

ಆಗಸ್ಟ್ 13ರಂದು ವೇಣೂರು ಠಾಣೆಯ ಎಎಸ್‌ಐ ಬೆಣ್ಣಿಚನ್, ಪಿಸಿ ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಂ. ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದೆ.

ನಂತರ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಹಮ್ಮದ್ ಶರೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!