ಪಿಂಚಣಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳಿಕ ಪಿಂಚಣಿದಾರರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹಾಗೂ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್. ನರಸಿಂಹ ಮಾತನಾಡಿದರು.


ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಕೋಶಾಧಿಕಾರಿ ಬಲ್ಕೀಸ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತ ಶೆಟ್ಟಿ, ಬೀಡಿ ಎಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಉಡುಪಿ ಅಧ್ಯಕ್ಷೆ ನಳಿನಿ ಎಸ್., ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಮುಖಂಡರಾದ ನಾಗೇಶ್ ಬೆಳ್ಮಣ್, ಉಡುಪಿ ಕಟ್ಟಡ ಸಂಘದ ಮುಖಂಡ ದಯಾನಂದ ಕೋಟ್ಯಾನ್, ಭವಿಷ್ಯ ನಿಧಿ ಪಿಂಚಣಿದಾರರ ಸಂಘದ ಅಧ್ಯಕ್ಷೆ ಲಲಿತಾ ಸುವರ್ಣ, ಕೋಶಾಧಿಕಾರಿ ಸರೋಜ ಎಸ್. ಉಪಸ್ಥಿತರಿದ್ದರು.
ಮುಖಂಡರಾದ ಗಿರಿಜಾ, ವಂಸತಿ, ವಾರಿಜ, ಇಂದಿರಾ, ಸುಂದರಿ, ರಮೇಶ್ ಜತ್ತನ್ನ, ಸುಮತಿ ಕಾರ್ಕಳ, ವಿಶಾಲ, ಲಕ್ಷ್ಮೀ ಕಾರ್ಕಳ ಮತ್ತಿತರರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!