ಉಡುಪಿ: ನಗರದ ರಥಬೀದಿಯ ರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.


ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಸ್ಕರ್ ಸೇರಿಗಾರ್ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಸಾದ್ ತಂತ್ರಿ ಅಲೆವೂರು, ಸರ್ವಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

