ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

ಬೆಳ್ಳಾರೆ ಪೊಲೀಸ್ ಠಾಣಾ ಅ. ಕ್ರ : 12/2020, ಕಲಂ : 354(A1),506 IPC ಮತ್ತು ಕಲಂ : 8 POCSO ACT -2012 ರಂತೆ ದಾಖಲಾಗಿದ್ದ ಪ್ರಕರಣದಲ್ಲಿ, ಆರೋಪಿತನಾದ ಕಡಬ ಕುದ್ಮಾರು ನಿವಾಸಿಯಾದ ಅಬ್ದುಲ್ಲಾ(64) ಎಂಬವರಿಗೆ, ಮಾನ್ಯ 7 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇಲ್ಲಿ ವಿಚಾರಣೆ ನಡೆದು, ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿರವರು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿ ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ವಾಸವನ್ನು ಮತ್ತು 35,000 ದಂಡವನ್ನು ವಿಧಿಸಿದ್ದು ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಸಾಧಾ ಕಾರಾಗೃಹ ಶಿಕ್ಷೆ ವಿಧಿಸಿ ಅದೇಶಿಸಿರುತ್ತದೆ.

ಸದ್ರಿ ಪ್ರಕರಣದ ಅಂದಿನ ತನಿಖಾಧಿಕಾರಿಗಳು ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸರ್ಕಾರ ಅಭಿಯೋಜಕರಾದ ಪುಷ್ಪರಾಜ್ ರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!