ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ವತಿಯಿಂದ ಆಗಸ್ಟ್ 22ರಂದು ಕಾರ್ಕಳದ ಪೆರ್ವಾಜೆಯ ಸುಂದರ ಪುರಾಣಿಕ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಈ ಮೂಲಕ ತಂಡವು ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ರಾಧಾ ಪ್ರಭು, ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಪ್ರಕಾಶ್ ಶೆಣೈ, ಸಂಸ್ಥೆಯ ಪ್ರಾಂಶುಪಾಲರಾದ ಅಜಿಲ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕಬಡ್ಡಿ ತರಬೇತುದಾರರಾದ ಉಷಾ ಶೆಟ್ಟಿ ಹಾಗೂ ನಿಟ್ಟೆ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ಅಧಿಕಾರಿ ಗಣೇಶ್ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆ ಸಂಸ್ಥೆಗೆ ಹೆಮ್ಮೆ ತಂದಿದ್ದು, ಮುಂದಿನ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.

