ಪೋಕ್ಸೋ ಪ್ರಕರಣದಲ್ಲಿ ಆರೋಪಿಯ ದಸ್ತಗಿರಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪ್ರಕರಣದ ಆರೋಪಿಯಾದ ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್‌ (21) ಎಂಬಾತನು 2025ನೇ ಸಾಲಿನ ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ ಬಲವಂತವಾಗಿ ಅತ್ಯಾಚಾರ ಮಾಡಿ, ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದು, ಸದ್ರಿ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುತ್ತಾಳೆ. ಈ ಬಗ್ಗೆ ದಿನಾಂಕ 23.08.2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:60/2026, ಕಲಂ 64(2)(m),65(1),351(2) BNS ಕಲಂ:4(2),6 ಪೋಕ್ಸೋ ಪ್ರಕರಣದ ದಾಖಲಿಸಿಕೊಂಡು ತನಿಖೆ ಪ್ರಗತಿಯಲ್ಲಿರುತ್ತದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಆರೋಪಿ ಶ್ರೀಕಾಂತ್‌ ನನ್ನು ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ್ ಆರ್. ಗಾಣಿಗೇರ, ಧರ್ಮಸ್ಥಳ ಠಾಣಾ HC 418 ವೃಷಭ, HC 369 ಮಹೇಶ್, ಸಿಪಿಸಿ 975 ಚರಣ್ ರಾಜ್ ಎಂಬವರುಗಳ ತಂಡ ದಿನಾಂಕ: 25/08/2026 ರಂದು ಬೆಂಗಳೂರಿನ ದೊಡ್ಡಬಳ್ಳಾಪುರ ಎಂಬಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!