ವೇಣೂರು: ದರೋಡೆ ಪ್ರಕರಣವೊಂದರಲ್ಲಿ ಆರೋಪಿಯಾಗಿ, ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವೇಣೂರು ಪೊಲೀಸ್ ಠಾಣಾ ಅಪರಾಧ ಸಂಖ್ಯೆ 16/2012, ಕಲಂ 395 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಕೆ @ ಶಿನಪ್ಪ @ ಶೀನ (43) ಎಂಬಾತನನ್ನು ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿಂದ ಪೊಲೀಸರು ಬಂಧಿಸಿದ್ದಾರೆ.

ವೇಣೂರು ಠಾಣೆಯ ಎಎಸ್ಐ ಬೆನ್ನಿಚನ್, ಹೆಚ್‌ಸಿ ಕೃಷ್ಣ, ಸಿಪಿಸಿ ಬಸವರಾಜ್ ಎಸ್‌ಪಿ ಹಾಗೂ ಸಿಪಿಸಿ ಮೋಹನ್ ಕುಮಾರ್ ಅವರನ್ನೊಳಗೊಂಡ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸುಮಾರು 13 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ವೇಣೂರು ಠಾಣಾ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ.


