ನಿಟ್ಟೆ: ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಕಲ್ಲಂಗಡಿ ಸಾಗಾಟದ ಲಾರಿ

ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ.


ಅಪಘಾತದ ರಭಸಕ್ಕೆ ಲಾರಿ ಬಸ್ಟ್ಯಾಂಡ್ ಮುಂಭಾಗದಲ್ಲಿ ಮಗುಚಿಬಿದ್ದಿದ್ದು, ಅದರಲ್ಲಿದ್ದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದರ ಪರಿಣಾಮ ಕೆಲಕಾಲ ಸ್ಥಳದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು.


ಡಿಕ್ಕಿಯ ತೀವ್ರತೆಗೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.

SHARE
Loading spinner

One thought on “ನಿಟ್ಟೆ: ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಕಲ್ಲಂಗಡಿ ಸಾಗಾಟದ ಲಾರಿ

Leave a Reply

Your email address will not be published. Required fields are marked *

error: Content is protected !!