ಪಣಂಬೂರಿನಲ್ಲಿ ಚರಂಡಿಗೆ ನುಗ್ಗಿ ಪಲ್ಟಿಯಾದ ಎಕ್ಸ್‌ಪ್ರೆಸ್ ಬಸ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ನುಗ್ಗಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಬೆಳ್ಳಣ್ ನಿವಾಸಿ ಆದಿತ್ಯ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರು ಉತ್ತರ ಸಂಚಾರ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಿದ್ದಾರೆ.

ಘಟನೆ ಸಂಬಂಧ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

SHARE
Loading spinner

One thought on “ಪಣಂಬೂರಿನಲ್ಲಿ ಚರಂಡಿಗೆ ನುಗ್ಗಿ ಪಲ್ಟಿಯಾದ ಎಕ್ಸ್‌ಪ್ರೆಸ್ ಬಸ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು

Leave a Reply

Your email address will not be published. Required fields are marked *

error: Content is protected !!