ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಉದ್ಘಾಟನೆ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಕಳೇನ ಅಗ್ರಹಾರದಲ್ಲಿರುವ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಆವರಣವನ್ನು ಸೆ. 5ರಂದು ಉದ್ಘಾಟಿಸಲಾಯಿತು.

ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಅತಿ ವಂದನೀಯ ಡಾ. ಪೀಟರ್ ಮಚಾಡೊ ಆಶೀರ್ವಚನ ನೀಡಿದರು. ಕರ್ನಾಟಕ ಜೆಸ್ಯೂಟ್ ಪ್ರಾಂತ್ಯದ ಪ್ರಾಂತಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಪತಿ ಫಾ. ಡಯೋನಿಸಿಯಸ್ ವಾಜ್, ಉಪಕುಲಪತಿ ಫಾ. ಡಾ. ವಿಕ್ಟರ್ ಲೋಬೋ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಶಿಸ್ತು ಮತ್ತು ನೈತಿಕ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದು, ಶೈಕ್ಷಣಿಕ ಜ್ಞಾನದ ಜತೆಗೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇಂತಹ ಮೌಲ್ಯಗಳು ಅಗತ್ಯ ಎಂದರು.

ಆರ್ಚ್‌ಬಿಷಪ್ ಪೀಟರ್ ಮಚಾಡೊ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರು ಹಾಗೂ ಶಿಕ್ಷಣ ಪಡೆಯಲು ಸಾಧ್ಯವಾಗದವರಿಗೂ ಅವಕಾಶ ಕಲ್ಪಿಸುವುದು ವಿಶ್ವವಿದ್ಯಾಲಯದ ಪ್ರಮುಖ ಧ್ಯೇಯವಾಗಿದೆ ಎಂದರು.

ಉಪಕುಲಪತಿ ಫಾ. ಡಾ. ವಿಕ್ಟರ್ ಲೋಬೋ, ನೂತನ ಆವರಣವು ವಿದ್ಯಾರ್ಥಿಗಳ ಜ್ಞಾನ, ನಾವೀನ್ಯತೆ ಮತ್ತು ಹೊಸ ಆಲೋಚನೆಗಳಿಗೆ ವೇದಿಕೆಯಾಗಬೇಕು ಎಂದು ಆಶಿಸಿದರು.ಸಮಾರಂಭದಲ್ಲಿ ‘ಬಿ’ ಬ್ಲಾಕ್‌ನ ಶಿಲಾನ್ಯಾಸ ಫಲಕವನ್ನು ಗಣ್ಯರು ಅನಾವರಣಗೊಳಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!