ಬೆಳಕೆ ಗ್ರಾ ಪಂ ಗೆ ಸಾಮಾಜಿಕ ಪರಿಶೋಧನಾ ನಿರ್ದೇಶಕರ ಭೇಟಿ

ಭಟ್ಕಳ: ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ಸಿ.ಕೆ.ಮಲ್ಲಪ್ಪ ಮಾನ್ಯ ಸಾಮಾಜಿಕ ಪರಿಶೋಧನಾ ನಿರ್ದೇಶಕರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಸಾಮಾಜಿಕ ಪರಿಶೋಧನೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನೆಯ ವಿವಿಧ ಹಂತಗಳು, ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳು ಹಾಗೂ ಪ್ರಗತಿಯ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಾಮಾಜಿಕ ಪರಿಶೋಧನೆ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ, ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಸಾಮಾಜಿಕ ಪರಿಶೋಧನೆಯ ಮಹತ್ವ ಹಾಗೂ ಅನುಷ್ಠಾನದ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.

ಪರಿಶೀಲನೆಯ ಬಳಿಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ VB-G RAM G ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿ, ಯೋಜನೆಯ ಅನುಷ್ಠಾನ, ಕೂಲಿ ಪಾವತಿ ಹಾಗೂ ಕೆಲಸದ ಅನುಭವದ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಎಂ., ಡಿಪಿಎಂ ಜಿ ಐ ಹೆಗಡೆ ತಾಲೂಕು ಸಂಪನ್ಮೂಲ ವ್ಯಕ್ತಿ ಉಮೇಶ ಮುಂಡಳ್ಳಿ, ಚಿದಾನಂದ ಗೌಡ (ಹೊನ್ನಾವರ), ತಾಂತ್ರಿಕ ಸಂಯೋಜಕ ವಿನಾಯಕ ನಾಯಕ, AEE ಗಣೇಶ, ತೋಟಗಾರಿಕೆ ಅಧಿಕಾರಿ ಶ್ರವಣ ಕುಮಾರ, ಪಿಡಿಒ ರಾಜೇಶ್ವರಿ ಚಂದಾವರ, ತಾಂತ್ರಿಕ ಸಹಾಯಕಿ ಜಯಶ್ರೀ ನಾಯ್ಕ, VRP, BFT ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಾಮಾಜಿಕ ಪರಿಶೋಧನೆಯ ಮೂಲಕ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ.

SHARE
Loading spinner

One thought on “ಬೆಳಕೆ ಗ್ರಾ ಪಂ ಗೆ ಸಾಮಾಜಿಕ ಪರಿಶೋಧನಾ ನಿರ್ದೇಶಕರ ಭೇಟಿ

Leave a Reply

Your email address will not be published. Required fields are marked *

error: Content is protected !!