ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಯುವಕನನ್ನು ಬಂಧಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ:18/2005, ಕಲಂ:4, 6, ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯಾದ ಕೌಕ್ರಾಡಿ ನಿವಾಸಿ ರಮೇಶ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ಸಿಬ್ಬಂದಿ ದಯಾನಂದ ಪಿಸಿ 453 ರವಿರಾಜ್ ರವರು ನೆಲ್ಯಾಡಿ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


