ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿಗಳಾದ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ಸಾರಿಗೆ ಬಸ್ ತೆರಳುತ್ತಿದ್ದ ವೇಳೆ ಬೈಕ್ ಬಸ್‌ಗೆ ಡಿಕ್ಕಿ ಹೊಡೆದು ಅದರ ಕೆಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Everything about this site just works. It’s stable, fast, and the rewards are generous. If you are looking for a new spot, vnw88yes is it.