ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆ ಕಾರ್ಕಳ ಸಮೀಪದ ಸಾಣೂರು ಜಂಕ್ಷನ್ನಲ್ಲಿ ನಡೆದಿದೆ. ಕಾರ್ಕಳ–ಮೂಡುಬಿದಿರೆ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.


ಅಪಘಾತದಲ್ಲಿ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಅವರ ಕಾರು ಚಾಲಕ ಹಾಗೂ ಆಪ್ತ ಸಹಾಯಕ ಸೇರಿದಂತೆ ಕೆಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

