ದಕ್ಷಿಣ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾಗಿದ್ದ ಕಾರ್ಕಳದ ಪಾರ್ಥ ಅಲಿಯಾಸ್ ಪಾರ್ಥಸಾರಥಿ ಎಂಬಾತನ ವಿರುದ್ಧ ಮಾನ್ಯ 2ನೇ ಸಿಜೆಎಂ ನ್ಯಾಯಾಲಯವು ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಆರೋಪಿಯು ಸುಮಾರು ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ದಕ್ಷಿಣ ಪೊಲೀಸ್ ಠಾಣೆಯ ಎಎಸ್‌ಐ ಗಣೇಶ್, ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಮಲ್ಲಿಕ್ ಜಾನ್ ಅವರ ತಂಡ ಕದ್ರಿ ಮೈದಾನ ಬಳಿ ಆರೋಪಿಯನ್ನು ಬಂಧಿಸಿದೆ.

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.2017ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 324, 326 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

