ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಹಾಗೂ ರಕ್ತದಾನ ಶಿಬಿರ

ಕನ್ಯಾನ: ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ , ಪುತ್ತೂರು , ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು , ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಸೆಪ್ಟೆಂಬರ್ 27ರಂದು ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕನ್ಯಾನದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಕಣ್ಣಿನ ತಪಾಸಣೆ, ದೃಷ್ಟಿ ಪರೀಕ್ಷೆ, ಕಣ್ಣಿನ ಪೊರೆ ಸೇರಿದಂತೆ ವಿವಿಧ ಕಣ್ಣಿನ ಸಮಸ್ಯೆಗಳ ತಪಾಸಣೆ ನಡೆಸಲಾಗುವುದು. ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆಯ ಕುರಿತು ವೈದ್ಯಕೀಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ.

ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರ ಕೂಡ ನಡೆಯಲಿದ್ದು, ಅರ್ಹ ರಕ್ತದಾನಿಗಳು ಸ್ವಯಂಪ್ರೇರಿತವಾಗಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಕಣ್ಣಿನ ತಪಾಸಣೆಗೆ ಬರುವವರು ಅಗತ್ಯ ದಾಖಲೆಗಳೊಂದಿಗೆ ಆಗಮಿಸುವಂತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!