ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಗ್ಯಕ್ಕಾಗಿ ಸಾಮೂಹಿಕ ಪ್ರಾರ್ಥನೆ

ಕಾಪು: ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಶೀಘ್ರ ಗುಣಮುಖತೆಗಾಗಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘಗಳ ಪ್ರಮುಖರು ಹಾಗೂ ನವೋದಯ ಕುಟುಂಬದ ಸದಸ್ಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಮುಂದಾಳತ್ವದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಅವರು ಪ್ರಾರ್ಥನಾ ವಿಧಿ ನೆರವೇರಿಸಿದರು.

ಬಳಿಕ ಮಾತನಾಡಿದ ಕಾಪು ಶ್ರೀ ಹೊಸಮಾರಿಗುಡಿಯ ನವದುರ್ಗಾ ಲೇಖನಾ ಸಮಿತಿ ಅಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಸಹಸ್ರಾರು ಸಹಕಾರಿಗಳನ್ನು ಬೆಳೆಸುವಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಸಹಕಾರಿ ಕ್ಷೇತ್ರವನ್ನು ಬಾನೆತ್ತರಕ್ಕೆ ಕೊಂಡೊಯ್ದ ಅವರು ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಜನರ ಬದುಕಿಗೆ ಬೆಳಕು ನೀಡುವುದರೊಂದಿಗೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೂ ವಿಶೇಷ ಒತ್ತು ನೀಡಿದ್ದಾರೆ ಎಂದರು.

ಅಲ್ಪ ಅನಾರೋಗ್ಯದಿಂದ ಬಳಲುತ್ತಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಶೀಘ್ರ ಗುಣಮುಖರಾಗಿ, ಮತ್ತಷ್ಟು ಚೈತನ್ಯದಿಂದ ಬಡವರು ಹಾಗೂ ಜನಸಾಮಾನ್ಯರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ನವೋದಯ ಕುಟುಂಬದ ವತಿಯಿಂದ ಕಾಪು ಮಾರಿಯಮ್ಮನ ಸನ್ನಿಧಿಯಲ್ಲಿ ಪ್ರಾರ್ಥಿಸಲಾಯಿತು ಎಂದು ಅವರು ಹೇಳಿದರು.

ಈ ಸಂದರ್ಭ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ರಮೇಶ್ ಹೆಗ್ಡೆ ಕಲ್ಯ, ಕಾಪು ಸಿ.ಎ. ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಹರಿನಾಥ್ ಕೋಟ್ಯಾನ್, ಸಹಾಯಕ ಮೇಲ್ವಿಚಾರಕ ಕೃಷ್ಣ, ಮೇಲ್ವಿಚಾರಕಿ ಅನಿತಾ ಸೇರಿದಂತೆ ನವೋದಯ ಬಂಧುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!