ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ಅಟ್ಯಾಕ್

ವಿಜಯನಗರ:ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕರಡಿಯೊಂದು ಮಾರಣಾಂತಿಕ ದಾಳಿ‌ಮಾಡಿದೆ.ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಈ ಕರಡಿ ದಾಳಿ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಮಲಾಪುರ ಗ್ರಾಮದ ಬಸವರಾಜ್ (40) ಎಂಬುವವರ ಮೇಲೆ ಕರಡಿ ದಾಳಿ ಮಾಡಿ ತಲೆ ಸೇರಿದಂತೆ ನಾನಾ ಭಾಗಗಳಲ್ಲಿ ಪರಚಿದೆ. ಇದರಿಂದ ರೈತನ ತಲೆ ಸೇರಿದಂತೆ ಹಲವು ಭಾಗಗಳಲ್ಲಿ ಗಾಯಗಳಾಗಿವೆ.ಗಾಯಾಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!